ಆಕಾಶದಲ್ಲಿ ಆಕ್ಸಿಡೆಂಟ್ ಆಗ್ಹೋಗಿದೆ!

4:11 PM

[ದಟ್ಸ್‌ಕನ್ನಡ‌ದಿಂದ]


ಕಳೆದ ವಾರದಲ್ಲಿ ಹೆಚ್ಚೂಕಡಿಮೆ ಪ್ರತಿ ದಿವಸವೂ ಕೇಳಿಬರುತ್ತಿರುವ ವಿಮಾನ ಅಪಘಾತ ಕೊಂಚದರಲ್ಲೇ ತಪ್ಪಿದ ಸುದ್ದಿಗಳ ನಡುವೆ ಈಗ ವಿಮಾನಗಳಿಗೂ ಮೇಲೆ ಹಾರಾಡುವ ಉಪಗ್ರಹಗಳು ಅಪಘಾತಕ್ಕೀಡಾದ ಸುದ್ದಿ ಕೇಳಿಬಂದಿದೆ.

ಕಳೆದ ಮಂಗಳವಾರ ಸಂಭವಿಸಿದ ಘಟನೆಯೊಂದರಲ್ಲಿ ಬಾಹ್ಯಾಕಾಶದಲ್ಲಿ ರೌಂಡು ಹೊಡೆಯುತ್ತಿದ್ದ ಅಮೆರಿಕಾ ಹಾಗೂ ರಷ್ಯಾದ ಉಪಗ್ರಹಗಳು ಮುಖಾಮುಖಿ ಡಿಕ್ಕಿಹೊಡೆದಿವೆ. ಅಂತರಿಕ್ಷದ ಇಂತಹ ಮೊದಲ ಅಪಘಾತ ಎಂದು ಗುರುತಿಸಲಾಗಿರುವ ಈ ಘಟನೆ ಸೈಬೀರಿಯಾದ ಮೇಲೆ ಭೂಮಿಯಿಂದ ಸುಮಾರು ೭೮೦ ಕಿಲೋಮೀಟರುಗಳ ಎತ್ತರದಲ್ಲಿ ಸಂಭವಿಸಿದೆ.


You Might Also Like

0 Responses

Popular Posts

Like us on Facebook